ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್‍ಯಕ್ರಮಗಳಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಯೋಚನೆಗಳಿಗೆ ತಮ್ಮನ್ನು ತೆರೆದುಕೊಳ್ಳುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ಚಂದ್ರಶೇಖರ್ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭರತನಾಟ್ಯ ಮತ್ತು ಹವ್ಯಾಸಿ ಯಕ್ಷಗಾನ ಕಲಾವಿದೆ ಕು.ಶ್ರೇಯ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಲು ಪಠ್ಯೇತರ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಹಕಾರಿಯಾಗಿದ್ದು, ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದರು.
ವೇದಿಕೆಯಲ್ಲಿ ಉಪನ್ಯಾಸಕಿ ಶಶಿಕಲಾ ಉಪಸ್ಥಿತರಿದ್ದರು. ಉಪನ್ಯಾಸಕಿ ಅಕ್ಷತಾ ಸ್ವಾಗತಿಸಿ, ವಂದಿಸಿದರು.
ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮನಸೆಳೆಯಿತು. ನನ್ನ ದೇಶ ನನ್ನ ಹೆಮ್ಮೆ ಎಂಬ ವಿಷಯದ ಆಧಾರದ ಮೇಲೆ ದೇಶದ ವಿವಿಧ ರೀತಿಯ ನೃತ್ಯ ಪ್ರಕಾರಗಳ ಜೊತೆಗೆ ಜಾನಪದ ನೃತ್ಯ, ವೀರಗಾಸೆ, ಭರತ ನಾಟ್ಯ, ಕೋಲಾಟ, ಯಕ್ಷಗಾನ ಮೊದಲಾದ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದುಕೊಂಡರು.