ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆ.19 ಶನಿವಾರ ನಡೆಯಿತು.

ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಪೂಜೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿದ್ದರು.