ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಪುತ್ತೂರು: ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.

ಐದು ಗ್ಯಾರಂಟಿ ಯೋಜನೆಗಳು ಇಂದು ಎಲ್ಲರ ಮನೆಯನ್ನು ಬೆಳಗಿಸಿದೆ. ಅಧಿಕಾರಕ್ಕೆ ಬಂಧ ಮೂರೇ ತಿಂಗಳೊಳಗೆ ಗ್ಯಾರಂಟಿಯನ್ನು ಈಡೇರಿಸಿದ್ದೇವೆ ಇದು ಕಾಂಗ್ರೆಸ್ ಪಕ್ಷದ ತಾಕತ್ತು ರಂದು ಶಾಸಕರು ಹೇಳಿದರು. ಟೀಕೆ ಮಾಡುವವರು ಮಾಡುತ್ತಲೇ ಇದ್ದಾರೆ, ಇವರ ಟೀಕೆಗಳ ನಡುವೆಯೃ ಸರಕಾರ ಐದು ಗ್ಯಾರಂಟಿಯನ್ನು ಜಾರಿಗೆ ತಂದಿದ್ದು ಜನತೆಗೆ ಕೊಟ್ಟ ಮಾತನ್ನು ಸರಕಾರ ಈಡೇರಿಸಿದೆ ಎಂದರು.



































 
 

ವೇದಿಕೆಯಲ್ಲಿ‌ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಈಶ್ವರಮಂಗಲ ಮಂಡಲ ಪಂಚಾಯತ್ ಮಾಜಿ ಉಪ ಪ್ರಧಾನ ಬಾಲಕೃಷ್ಣ ರೈ ಕುದ್ದಾಡಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಕೆ, ಸದಸ್ಯರಾದ ರವಿರಾಜ ರೈ ಸಜಂಕಾಡಿ, ಜ್ಯೋತಿ ಅಂಬಟೆಮೂಲೆ, ಧರ್ಮೇಂದ್ರ ಪದಡ್ಕ, ಕಲಾವತಿ ಗೌಡ ಪಟ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top