ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ

ಸುಳ್ಯ: ಸೌಜನ್ಯ ಕೊಲೆ ನೈಜ ಆರೋಪಿಗಳು ಆದಷ್ಟು ಬೇಗ ಪತ್ತೆಯಾಗಿ ಸೂಕ್ತ ಶಿಕ್ಷೆಯಾಗುವಂತೆ ಅಜ್ಜಾವರ ಗ್ರಾಮದ ಶಿವಪ್ರಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ತೆರಳಿದ ಅಯ್ಯಪ್ಪ ಭಕ್ತರು ಶಬರಿಮಲೆಯಲ್ಲಿ ಇಂದು ಮುಂಜಾನೆ ಪ್ರಾರ್ಥನೆ ಮಾಡಿದರು.

ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಟ್ಟ ಹೆಸರುಗಳು ಕೇಳಿ ಬರುತ್ತಿದ್ದು, ಅಯ್ಯಪ್ಪನ ಕೃಪಾಕಟಾಕ್ಷದಿಂದ ಮುಂದಿನ ಸಂಕ್ರಮಣದೊಳಗೆ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top