ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಸೋಮವಾರ ಆಚರಿಸಲಾಯಿತು.
ಕ್ಷೇತ್ರದ ನಾಗಸನ್ನಿಧಿಯಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಲಾಯಿತು.
ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.