ಪುತ್ತೂರು: ಪುತ್ತೂರು ತಾಲೂಕು ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಕಳೆದ 25 ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಕೆಲಸ ನಿರ್ಯವಹಿಸುತ್ತಿದ್ದು, ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.