ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ.
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ. ಈ ತಿಂಗಳ 25 ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದಿಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಲು ಆದೇಶಿಸಲಾಗಿದೆ.