ಪುತ್ತೂರು: ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ವತಿಯಿಂದ 49ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಿತು.

ಶ್ರೀ ಗುರುರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಸುಮಾರು 500 ಕ್ಕೂ ಮಿಕ್ಕಿ ಭಕ್ತಾದಿಗಳು ಪೂಜಾ ಸೇವೆ ಮಾಡಿಸಿದ್ದು, ಪ್ರಸಾದ ಸ್ವೀಕರಿಸಿದರು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.