ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿದ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಶ್ರೀ ಲಕ್ಷ್ಮೀದೇವಿ ಭಕ್ತ ವೃಂದ ಹಾಗೂ ಶ್ರೀ ಲಕ್ಷ್ಮೀದೇವಿ ಬೆಟ್ಟದ ಜಂಟಿ ಆಶ್ರಯದಲ್ಲಿ ನಡೆದ ಪೂಜೆಯಲ್ಲಿ ಭಕ್ತಾದಿಗಳು ಪೂಜಾ ಸೇವೆ ಮಾಡಿದರು. ಕ್ಷೇತ್ರದ ಧರ್ಮದರ್ಶಿ ಯನ್.ಐತಪ್ಪ ಸಪಲ್ಯ ಪೂಜಾ ವಿವಿಧ ವಿಧಾನ ನೆರವೇರಿಸಿ ಪೂಜೆಯ ಪ್ರಸಾದ ರೂಪದಲ್ಲಿ ಬಳೆ, ಕುಂಕುಮ, ಅರಿಶಿನ, ರವಿಕೆಕಣವನ್ನು ಭಕ್ತಾದಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀಕೃಷ್ಣ ಉಪಾಧ್ಯಾಯರಿಂದ ಪ್ರವಚನ ನಡೆಯಿತು.

ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ನೂರಾರು ಮಂದಿ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.