ಮರದಿಂದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಸೋಮನಾಥ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ನೆಲ್ಯಾಡಿ: ಮರದಿಂದ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಲಂಪಾಡಿಯ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ಸೋಮನಾಥ (47) ಮೃತಪಟ್ಟವರು.

15 ದಿನಗಳ ಹಿಂದೆ ಇಚ್ಲಂಪಾಡಿ ಗ್ರಾಮದ ಮಾನಡ್ಕ ಎಂಬಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮರ ಏರಿ ಗೆಲ್ಲುಗಳನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top