ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ | ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ | ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಆ.27 ಭಾನುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳುತ್ತಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲಾ ಶಾಸಕರಿಂದ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೌಜನ್ಯ ಗೆ ನ್ಯಾಯ ದೊರಕಬೇಕು ಎಂಬ ನಿಟ್ಟಿನಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ವತಿಯಿಂದ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸೌಜನ್ಯ ತಾಯಿ ಪಾಲ್ಗೊಂಡಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top