ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ನಡೆಸಿ ಹಿಂದಿರುವ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆಗ್ರಹಿಸಿ ಪುತ್ತೂರು ಅಭಿನವ ಭಾರತ ಮಿತ್ರಮಂಡಳಿ ಹಾಗೂ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಜನಜಾಗೃತಿ ಮೆರವಣಿಗೆ ಸೋಮವಾರ ಸಂಜೆ ನಡೆಯಿತು.
ದರ್ಬೆ ನಿರೀಕ್ಷಣಾ ಮಂದಿರದ ಬಳಿಯಿಂದ ಹೊರ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯೊಂದಿಗೆ ಸಮಾಪನಗೊಂಡಿತು.
ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಅಭಿನವ ಭಾರತ ಮಿತ್ರಮಂಡಳಿ ಅಧ್ಯಕ್ಷ ದಿನೇಶ್ ಕುಮಾರ್ ಜೈನ್, ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಅನಿಲ್ ಬೆಳ್ತಂಗಡಿ, ಸಂತೋಷ್ ರಾವ್ ಪರ ವಾದ ಮಾಡಿದ ವಕೀಲರಾದ ಮೋಹಿತ್ ಕುಮಾರ್, ನವೀನ್ ಉಪಸ್ಥಿತರಿದ್ದರು. ಬೃಹತ್ ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು.