ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು : ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರ ಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ. ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ರೈತ ಸಮುದಾಯ ಸೇರಿದಂತೆ ಕೇರಳದ ಎಲ್ಲರಿಗೂ ಇದು ಬಹಳ ದೊಡ್ಡ ಹಬ್ಬ. ಹೊಸತನ,ವೈವಿಧ್ಯತೆಯನ್ನು ಹೊಂದಿರುವ ಈ ಆಚರಣೆಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಓಣಂ ಆಚರಣೆಯಲ್ಲಿ ಅವರು ಮಾತನಾಡಿದರು. ಓಣಂ ಆಚರಣೆಯ ಪ್ರಯುಕ್ತ ಸಾಂಪ್ರದಾಯಿಕ ಜಾನಪದ ನೃತ್ಯವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಪೂಕಳಂ ನಿರ್ಮಿಸಿ ಜ್ಯೋತಿ ಬೆಳಗಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕಿ ಅನಘಾ ಸ್ವಾಗತಿಸಿ, ವಂದಿಸಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top