ಪುತ್ತೂರು : ಪದವಿ ಪೂರ್ವ ಶಿಕ್ಷಣ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿದೆ.

ಬಾಲಕಿಯರ ವಿಭಾಗವನ್ನು ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಪ್ರತಿನಿಧಿಸಿದ್ದರು. ಬಾಲಕರ ವಿಭಾಗವನ್ನು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್, ಶ್ರೀನಿಧಿ ಎಸ್, ಸ್ಕಂದ ಕುಮಾರ್, ವಾಣಿಜ್ಯ ವಿಭಾಗದ ಲಿಖಿತ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್ ಪ್ರತಿನಿಧಿಸಿದ್ದರು.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್‌ರಾಮ್ ಬಾಲಕರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್ ಎನ್ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.