ಪುತ್ತೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಕೆಲವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುವ ಕೆಲಸವನ್ನು ಮಾಡುತ್ತಿದ್ದಾರೆ, ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ಮಾತ್ರ ದೊರೆಯಲು ಸಾಧ್ಯ, ಸರಕಾರಿ ಶಾಲೆಗಳಲ್ಲಿನ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಹಂತ ಹಂತವಾಗಿ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲಿ ನಡೆದ ವಿವೇಕ ಕೊಠಡಿ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಿಮ್ಮ ಮಕ್ಕಳು ಇಂಗ್ಲೀಷ್‌ನಲ್ಲಿ ಮಾತನಾಡುವುದನ್ನು ಕಲಿಯಬೇಕು, ಕನ್ನಡದ ಜೊತೆಗೆ ಇಂಗ್ಲೀಷ್‌ಗೂ ಹೆಚ್ಚಿನ ಒತ್ತು ಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಕಷ್ಟವಿದೆ. ಈಗಾಗಲೇ ಒಟ್ಟು ೧೩ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸಲಾಗಿದೆ. ಸ್ಪೋಕನ್ ಇಂಗ್ಲೀಷ್ ತರಗತಿಯನ್ನು ಮಕ್ಕಳಿಗೆ ನೀಡಬೇಕಾದ ಅವಶ್ಯಕತೆ ಇದೆ ಎಂದು ಶಾಸಕರು ಹೇಳಿದರು. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಲ್ಲಿ ಮುಂದೆ ಇದ್ದು ಅದಕ್ಕೆ ಇನ್ನಷ್ಟು ಪ್ರೋತ್ಸಾಹವನ್ನು ಕೊಡಬೇಕು ಎಂದು ಹೇಳಿದರು. ಕಷ್ಟ ಎಂದು ಯಾವುದನ್ನೂ ತಿರಸ್ಕಾರ ಮಾಡಬೇಡಿ, ಕಷ್ಟ ಎಲ್ಲೆಲ್ಲೂ ಇದೆ ಕಷ್ಟವಿಲ್ಲದೆ ಯಾವುದನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಶಾಲಾ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲೆಯಲ್ಲಿ ಧೈಹಿಕ ಶಿಕ್ಷಕರಾಗಿದ್ದು ವರ್ಗಾವಣೆಗೊಂಡ ಉಮಾ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿಗ್ರಾಪಂ ಅಧ್ಯಕ್ಣ ಸಂತೋಷ್ ಮಣಿಯಾಣಿ, ಉಪಾಧ್ಯಕ್ಣೆ ಮೀನಾಕ್ಷಿ,ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಎಸ್ ಆರ್,ಎಸ್ ಡಿಎಂಸಿ ಅಧ್ಯಕ್ಷ ದಿನೇಶ್, ಗ್ರಾಪಂ ಸದಸ್ಯರಾದ ಅನಿತಾ, ವಿನುತಾ,ನಾರಾಯಣ ನಾಯ್ಕ,ಭಾರತಿ, ಗ್ರಾಪಂ ಮಾಜಿ ಅಧ್ಯಕ್ಷೆ ಸೌಮ್ಯಾ,ಜಾರತ್ತಾರು ಹರೀಶ್ ರೈ, ಮಾಜಿ ಕಾರ್ಯಾಧ್ಯಕ್ಷರುಗಳಾದ ಅಮ್ಮಣ್ಣ ರೈ,ತಿಲಕ್ ರೈ ಕುತ್ಯಾಡಿ, ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್, ಅರಿಯಡ್ಕ ಗ್ರಾಪಂ ಪಿಡಿಒ ಪದ್ಮಕುಮಾರಿ, ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿತೆರೆಸಾ ಸಿಕ್ವೆರಾ ಸ್ವಾಗಸಿದರು. ಮೇಬಲ್ ಡಿಸೋಜಾ ವಂದಿಸಿದರು. ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಜಯಲತಾ, ರಜನಿ ಕೆ ಆರ್, ಕುಸುಮಾ ಸಹಕರಿಸಿದರು.