ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪುತ್ತೂರು: ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ .ಎಂದು ನರೇಂದ್ರ ಪ.ಪೂ  ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು.

ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಜೀವನದ ಪ್ರತಿಯೊಂದು ಅಂಶಗಳನ್ನು ತಿದ್ದಿ ತೀಡಿ ಮತ್ತು ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ತಿಳಿಸುತ್ತಾರೆ. ವಿದ್ಯಾರ್ಥಿಗಳ ಬದುಕು ಯಾವಾಗಲೂ ಹಸನಾಗಿರಲಿ ಎಂದು ಹಾರೈಸುವ ಅವರ ಪ್ರಯತ್ನಗಳನ್ನು ಗುರುತಿಸುವುದು ಮತ್ತು ಆಚರಿಸುವುದು ಮುಖ್ಯವಾಗಿದೆ. ಎಂದು ಹೇಳಿದರು.































 
 

ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಮತ್ತು ಸೌಮ್ಯ ಶಿಕ್ಷಕರ ದಿನಾಚರಣೆಯ ಮತ್ತು ವಿದ್ಯಾರ್ಥಿ ಜೀವನದಲ್ಲಿ ಗುರುವಿನ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕಿ ಕು.ಶರಣ್ಯ  ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top