ಶ್ರೀ ಕೃಷ್ಣ ಜನ್ಮಾಷ್ಟಮಿ : ಇಂದಿನಿಂದ ಸೆ.9 ರ ತನಕ ದ.ಕ.ಜಿಲ್ಲೆಯಾದ್ಯಂತ ವೈನ್‍ಶಾಪ್ / ಬಾರ್ ಬಂದ್

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರುಕುಡಿಕೆ ಅಂಗವಾಗಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಸೆ.9 ರ ತನಕ ಬಾರ್ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ  ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ವೇಳೆ ಸಾವಿರಾರು ಸಾರ್ವಜನಿಕರು, ಮಕ್ಕಳು, ಮಹಿಳೆಯರು, ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ.

ಹಾಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ದ.ಕ. ಜಿಲ್ಲೆಯಾದ್ಯಂತ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆ ತನಕ ವೈನ್‍ಶಾಪ್‍/ಬಾರ್ ಮುಚ್ಚಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top