ಮಂಗಳೂರು : ಮಂಗಳೂರು ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಬೇಕು ಮತ್ತು ತನಿಖಾಧಿಕಾರಿ ಹಾಗೂ ವೈದ್ಯರನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಆರೋಪಿಗಳನ್ನು ಕಾನೂನು ಪ್ರಕಾರ ಶಿಕ್ಷಕಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ಸೆ.12 ಹಾಗೂ 13 ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಇರುವ ತಾಲೂಕು ಕಚೇರಿ ಬಳಿ ನಡೆಯಲಿದೆ.
ಎರಡು ದಿನಗಳ ಕಾಲ ನಡೆಯುವ ಧರಣಿ ಸತ್ಯಾಗ್ರಹ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ನಡೆಯಲಿದೆ.
ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಸಂಘಗಳು ಈ ಕೆಳಗಿನಂತಿವೆ :
ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಬೆಳ್ತಂಗಡಿ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ವಿಟ್ಲ, ಬಂಟ್ವಾಳ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಪುತ್ತೂರು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಕಡಬ, ಗೌಡರ ಯಾನೆ ಸೇವಾ ಸಂಘ ಸುಳ್ಯ ಹಾಗೂ ಒಕ್ಕಲಿಗರ ಗೌಡರ ಸಂಘ ಬೆಳ್ತಂಗಡಿ ತಾಲೂಕು.
ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವಂತೆ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.