ಪುತ್ತೂರು : ಯೇಸುಕ್ರಿಸ್ತ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ‘ಮೊಂತಿ ಫೆಸ್ತ್(ತೆನೆ ಹಬ್ಬ)-ಕುಟುಂಬದ ಹಬ್ಬ’ ವನ್ನು ನಗರದ ಮಾಯಿದೆ ದೇವುಸ್ ಚರ್ಚ್‍ನಲ್ಲಿ ಶುಕ್ರವಾರ ಆಚರಿಸಲಾಯಿತು.


ಈ ಹಿನ್ನೆಲೆಯಲ್ಲಿ ಮಾಯಿದೆ ದೇವುಸ್ ಚರ್ಚ್ನಲ್ಲಿ ಬೈಬಲ್ ವಾಚಿಸಿ ಹಬ್ಬದ ಸಂದೇಶ ನೀಡಲಾಯಿತು.

ಭತ್ತದ ತೆನೆಗಳನ್ನು ಆಯಾ ಚರ್ಚ್‌ನಲ್ಲಿ ಪ್ರಮುಖರು ಸಂಗ್ರಹಿಸಿ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆ, ಸಿಹಿತ ಪ್ರತೀಕವಾಗಿ ಕಬ್ಬನ್ನು ಆಯಾ ಚರ್ಚ್‌ಗಳಲ್ಲಿ ಭಕ್ತರಿಗೆ ದಿವ್ಯಬಲಿಪೂಜೆಯ ಬಳಿಕ ಹಂಚಲಾಯಿತು. ಇದೇ ಸಂದರ್ಭದಲ್ಲಿ ಮೇರಿ ಮಾತೆಗೆ ಮಕ್ಕಳು ಹೂ ಅರ್ಪಿಸಿದರು.