ಸುಳ್ಯ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾ ವತಿಯಿಂದ ಸೆ. 11ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಜನಪ್ರತಿನಿಧಿಗಳು, ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಬಿಜೆಪಿಯ ಪ್ರಮುಖರು, ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ರೈತ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.