ಜಾಲ್ಸೂರು: ವಿದ್ಯಾರ್ಥಿನಿಯೋರ್ವಳಿಗೆ ಆಂಬ್ಯುಲೆನ್ಸ್ ಢಿಕ್ಕಿಯಾಗಿದ ಘಟನೆ ಕನಕಮಜಲಿನಲ್ಲಿ ಸೆ. 12ರಂದು ಸಂಜೆ ನಡೆದಿದೆ.
ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿನಿ ಯೋಗಿನಿ ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದ್ದು, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಅದೇ ಆಂಬ್ಯುಲೆನ್ಸ್’ನಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರನ್ನು ಆಂಬ್ಯುಲೆನ್ಸ್’ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ.