ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ, ಹಿರಿಯ ಜಾತ್ಯಾತೀತ ಪ್ರಗತಿಪರ ಚಿಂತಕರೂ ಆಗಿದ್ದ ಎನ್. ಸುಧಾಕರ ಶೆಟ್ಟಿ ಅವರ ನಿಧನಕ್ಕೆ ಸಿಪಿಐ(ಎಂ) ಪುತ್ತೂರು ತಾಲೂಕು ಸಮಿತಿ ಸಂತಾಪ ಸೂಚಿಸಿ ಶ್ರದ್ದಾಂಜಲಿ ಅರ್ಪಿಸಿದೆ.
ಸಿಪಿಐ(ಎಂ) ಪುತ್ತೂರು ತಾಲೂಕು ಕಾರ್ಯದರ್ಶಿ ಪಿ.ಕೆ. ಸತೀಶನ್ ಮಾತನಾಡಿ, ಸುಧಾಕರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಮುಖಂಡ ಎನ್ನುವುದಕ್ಕಿಂತ ಹೆಚ್ಚು, ಪ್ರಗತಿಪರ ಪ್ರಜಾಪ್ರಭುತ್ವ, ಜಾತ್ಯಾತೀತ ನಾಯಕರಾಗಿದ್ದರು. ಅವರ ಅಗಲಿಕೆ ಜಾತ್ಯಾತೀತ ಶಕ್ತಿಗೆ ಅಪಾರ ನಷ್ಟ ಉಂಟು ಮಾಡಿದೆ ಎಂದು ಹೇಳಿದರು.