ಮಾಣಿಲ: ಯಕ್ಷಗಾನ ಕಲೆಯ ಅಭಿಮಾನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಇಂದಿನ ಅಗತ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾ ಪೋಷಕ, ಯಕ್ಷಾಭಿಮಾನಿ ರಮೇಶ್ ಮಂಜೇಶ್ವರ ಹೇಳಿದರು.
ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಉಚಿತ ಯಕ್ಷಧ್ರುವ – ಯಕ್ಷ ಶಿಕ್ಷಣ, ನಾಟ್ಯ ತರಬೇತಿ ಶಿಕ್ಷಣ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಯಕ್ಷನಾಟ್ಯ ತರಗತಿಯನ್ನು ಫೌಂಡೇಶನ್ ವಿಟ್ಲ ಘಟಕದ ಗೌರವಾಧ್ಯಕ್ಷ, ವಿಟ್ಲ ಅರಮನೆಯ ಕೃಷ್ಣಯ್ಯ ತರಗತಿ ಉದ್ಘಾಟಿಸಿ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು, ಯಕ್ಷಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಸ್ಥಳದಾನಿ ಮಹಾಬಲ ಭಟ್ ಮುರುವ ಶುಭ ಹಾರೈಸಿದರು.
ಯಕ್ಷ ಶಿಕ್ಷಣ ಕಾರ್ಯಕ್ರಮ ಸಂಚಾಲಕ ವಾಸುದೇವ ಐತಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ. ಸದಸ್ಯ ವಿಷ್ಣು ಕನ್ನಡಗುಳಿ, ಯಕ್ಷಧ್ರುವ ಪಟ್ಲ ಫೌ೦ಡೇಶನ್ ನ ವಿಟ್ಲ ಘಟಕದ ಸಂಘಟನಾ ಕಾರ್ಯದರ್ಶಿ ಅರವಿಂದ ರೈ ಮೂರ್ಜೆಬೆಟ್ಟು, ಗ್ರಾ.ಪಂ. ಸದಸ್ಯ ವಿಷ್ಣು ಕೊಮ್ಮುಂಜೆ , ಯಕ್ಷ ಗುರು ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಲತಾ ಯು. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉಮಾನಾಥ ರೈ ಮೇರಾವು ವಂದಿಸಿದರು. ಶಿಕ್ಷಕ ಸುಧೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ ಸಹಕರಿಸಿದರು.