ಮತ್ತೆ ಕಾಣಿಸಿಕೊಂಡ ಬಾವಲಿಗಳಿಂದ ಹರಡುವ ನಿಫಾ ವೈರಸ್!! | ಇಬ್ಬರ ಸಾವಿನ ಬಳಿಕ ಎಚ್ಚರಿಕೆ ಸಂದೇಶ ರವಾನಿಸಿದ ಕೇರಳ ಸರಕಾರ!

ತಿರುವನಂತಪುರಂ: ಹಲವು ಸಾವು ನೋವಿಗೆ ಕಾರಣವಾಗಿದ್ದ ನಿಫಾ ವೈರಸ್ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಕೇರಳದಲ್ಲಿ ಇಬ್ಬರ ಅಸಹಜ ಸಾವು ಸಂಭವಿಸಿದ್ದು, ಮೃತರ ಸಂಬಂಧಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರದಿಂದ ಬಳಲುತ್ತಿದ್ದ ಕಾರಣ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಸಾವಿಗೆ ನಿಫಾ ವೈರಸ್‌ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಯ ವೈದ್ಯಕೀಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

ಇಬ್ಬರ ಅಸಹಜ ಸಾವು ಉಂಟಾದ ಹಿನ್ನೆಲೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಪರಿಸ್ಥಿತಿ ಬಗ್ಗೆ ತಿಳಿಯಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಉನ್ನತಮಟ್ಟದ ಸಭೆಯನ್ನು ನಡೆಸಲಾಗಿದೆ.

ಕೇರಳದಲ್ಲಿ 2018 ಹಾಗೂ 2021 ರಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್‌ ಹತ್ತಾರು ಸಾವು ನೋವುಗಳಿಗೆ ಕಾರಣವಾಗಿತ್ತು. ಕೋಝಿಕ್ಕೋಡ್ ನಲ್ಲಿ ಈ ಹಿಂದೆ ಕೂಡ ನಿಫಾ ವೈರಸ್‌ ಪ್ರಕರಣಗಳು ಪತ್ತೆಯಾಗಿತ್ತು. ಬಾವಲಿಗಳು ಕಚ್ಚಿದ ಹಣ್ಣನ್ನು ಸೇವಿಸಿದರೆ ಈ ವೈರಸ್‌ ಹರಡುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಹಾಗೂ ಪ್ರಾಣಿಗಳಿಗೂ ವೇಗವಾಗಿ ನಿಫಾ ವೈರಸ್‌ ಹರಡುತ್ತದೆ. ಇದು ಉಸಿರಾಟದ ತೊಂದರೆ, ತಲೆನೋವು, ಸ್ನಾಯು ಸೆಳೆತದಂತಹ ಲಕ್ಷಣಗಳನ್ನು ಒಳಗೊಂಡಿರುತ್ತದೆ.



































Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top