ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು.

ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ.

