ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ತಾಲೂಕು ವತಿಯಿಂದ ಭಜನಾ ಮಂಡಳಿ ಪರಿಷತ್ ಸಭೆ ನಡೆಯಿತು.
ಸೆ. 28ರಿಂದ ಅ. 4ರವರೆಗೆ ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ 25ನೇ ವರ್ಷದ ಭಜನಾ ಕಮ್ಮಟ ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ಮಂಡಳಿಯ ಸದಸ್ಯರು ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು.
ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ ಪಿ.ಕೆ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಜನಾ ಪರಿಷತ್ ತಾಲೂಕು ಅಧ್ಯಕ್ಷ ಸುಬ್ಬಯ್ಯ ರೈ , ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ , ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ, ಪುತ್ತೂರು ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು ಹಾಗೂ ತಾಲೂಕು ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.