ವಿವೇಕಾನಂದ ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲರಾಗಿ ದೇವಿಚರಣ್ ರೈ ಅಧಿಕಾರ ಸ್ವೀಕಾರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಉಪಪ್ರಾಂಶುಪಾಲರಾಗಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಅಧಿಕಾರ ಸ್ವೀಕರಿಸಿದರು.

ಉಪಪ್ರಾಂಶುಪಾಲ ಹುದ್ದೆಯ ಅಧಿಕಾರ ನೀಡಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದ ದೇಗುಲವಾಗಿದೆ. ಶೈಕ್ಷಣಿಕ, ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳನ್ನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ತೋರಿಸಿದ ಪರಿಣಾಮವಾಗಿ ಈ ವಿದ್ಯಾಸಂಸ್ಥೆಯು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿದೆ. ಪ್ರಾಂಶುಪಾಲರು ಮತ್ತು ನೂತನ ಉಪಪ್ರಾಂಶುಪಾಲರ ಅವಧಿಯಲ್ಲಿ ಈ ಸಂಸ್ಥೆ ಇನ್ನಷ್ಟು ಪ್ರಗತಿಪಥದತ್ತ ಮನ್ನಡೆಯಲಿ ಎಂದು ಶುಭ ಹಾರೈಸಿದರು.

ನೂತನ ಉಪಪ್ರಾಂಶುಪಾಲ ದೇವಿಚರಣ್ ರೈ ಮಾತನಾಡಿ, ಎಲ್ಲರ ಬೆಂಬಲ ಹಾಗೂ ಹಿರಿಯರ ಮಾರ್ಗದರ್ಶನದ ಮೂಲಕ ಈ ಉಪಪ್ರಾಂಶುಪಾಲ ಹುದ್ದೆಯನ್ನು ನಿರ್ವಹಿಸಲು ಸಾಧ್ಯ. ಇದಕ್ಕಾಗಿ ಎಲ್ಲರ ಸಹಕಾರ ಬೇಕು ಎಂದರು.



































 
 

ಕಾಲೇಜಿನ  ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ., ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯರಾದ ವತ್ಸಲಾ ರಾಜ್ಞಿ, ಡಾ. ಕೆ.ಎನ್. ಸುಬ್ರಹ್ಮಣ್ಯ, ಡಾ. ಮುರಳೀಕೃಷ್ಣ ರೈ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಉಪಸ್ಥಿತರಿದ್ದರು.

ದೇವಿಚರಣ್ ರೈ ಪರಿಚಯ:

ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಎಂಡೆಸಾಗು ನಿವಾಸಿಯಾಗಿರುವ ಅವರು ತಿಂಗಳಾಡಿ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪ್ರೌಢ, ಪದವಿಪೂರ್ವ ಶಿಕ್ಷಣ ಮತ್ತು ಪದವಿ ಶಿಕ್ಷಣವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದ್ದರು. 2022-03 ನೇ ಸಾಲಿನಲ್ಲಿ ಎಂ.ಸಿ.ಎ. ಪದವಿ ಪೂರ್ಣಗೊಳಿಸಿ ಬಳಿಕ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಪೂರೈಸಿರುತ್ತಾರೆ. ಸುಮಾರು 20 ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವಾ ಅನುಭವವನ್ನು ಹೊಂದಿರುವ ಇವರು, ವಿದ್ಯಾರ್ಥಿಗಳ ಹಾಗೂ ಶಿಕ್ಷಣ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. 2002-03ನೇ ಸಾಲಿನಲ್ಲಿ ಪುತ್ತೂರು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೃಷಿ ಚಟುವಟಿಕೆಗಳಲ್ಲೂ ಅನುಭವ ಹೊಂದಿರುವ ಅವರು ಬೆಳಿಯೂರುಗುತ್ತು ದಿ. ವಾಸುದೇವ ರೈ ಮತ್ತು ಗಂಗಾರತ್ನ ದಂಪತಿ ಪುತ್ರ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top