ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್ ಬೀಳಲಿದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂತ ದೇವಾಲಯಗಳ ಸುತ್ತಮುತ್ತ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶ್ರೀಘ್ರವೇ ಬ್ರೇಕ್ ಬೀಳಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಇಲಾಖೆ ಹೊರಡಿಸಿದೆ.
ಈ ನಿಯಮ ಇಲಾಖೆ ವ್ಯಾಪ್ತಿಯಲ್ಲಿ ಇರುವಂತ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದ್ದು, ದೇವಾಲಯದ ಹೊರ ಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಿರೋದು, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಬಳಕೆಗೆ ನಿಷೇಧವಿದ್ಧರೂ ನಿಯಮ ಅನುಸರಿಸದ ಕಾರಣ, ಸರ್ಕಾರ ಈ ನಿಯಮ ಜಾರಿಗೆ ನಿರ್ಧಾರ ಕೈಗೊಂಡಿದೆ.