ದ.ಕ. ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯ ಪ್ರಮುಖರು | ಮುಂದಿನ ಚುನಾವಣೆ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ರಾಜ್ಯದ ತಂಡ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ಪ್ರಮುಖರ ಸಮ್ಮುಖದಲ್ಲಿ ಸಭೆ ನಡೆಸಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಸುನಿಲ್ ಕುಮಾರ್, ವಿಭಾಗ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ ಪಾಲ್ಗೊಂಡಿದ್ದರು.

ಶಾಸಕರಾದ ರಾಜೇಶ್ ನಾಯಕ್, ಪ್ರತಾಪ್ ಸಿಂಹ ನಾಯಕ್, ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ ಹಾಗೂ ಜಿಲ್ಲಾ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top