ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌

ನವದೆಹಲಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ.

ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ಐಎ ತಿಳಿಸಿದೆ.



































 
 

2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top