ಪುತ್ತೂರು: ತಾಲೂಕು ಆಡಳಿತದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.
ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿ ಮಾತನಾಡಿ, ಭಾರತದ ಸಂವಿಧಾನ ವಿಶ್ವದ ಅತೀ ದೊಡ್ಡ ಹಾಗೂ ಪ್ರಾಮುಖ್ಯತೆ ಪಡೆದ ಸಂವಿಧಾನವಾಗಿದ್ದು, ಸಂವಿಧಾನ ದಿನಾಚರಣೆಯ ಮೂಲಕ ಯುವ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ. ಮೂಲಭೂತ ಹಕ್ಕುಗಳು ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಸಂವಿಧಾನದಲ್ಲಿ ಸೂಚಿಸಿದ, ಮೂಲಭೂತವಾಗಿರುವ ಕರ್ತವ್ಯಗಳನ್ನು ನಿಭಾಯಿಸಿದಾಗ ಹಕ್ಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ನಮ್ಮ ಹಕ್ಕುಗಳಿಗೆ ತೊಂದರೆ ಆದಾಗ ಸಂವಿಧಾನಾತ್ಮಕವಾಗಿ ಪಡೆಯಬಹುದಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಜೆ. ಶಿವಶಂಕರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು.
ತಾಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಸಹಕರಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ ಸ್ವಾಗತಿಸಿದರು. ತಾಲೂಕು ಕಚೇರಿಯ ದಯಾನಂದ ವಂದಿಸಿದರು.