ಪುತ್ತೂರು: ಕೈಮಣ ನಾರ್ಯಬೈಲು ಜೋಕಾಲಿ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ. 17ರಂದು ನಡೆಯಿತು.
ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಕಳುವಾಜೆ ನೆರವೇರಿಸಿದರು. ನಾರ್ಯಬೈಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಕುಮಾರ್ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾಪಂ ಸದಸ್ಯೆ ಉಮೇಶ್ವರಿ ಅಗಳಿ, ನಾರ್ಯಬೈಲು ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ವಿದ್ಯುತ್ ಗುತ್ತಿಗೆದಾರ ಚೇತನ್ ನಾವೂರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪದಲ್ಲಿ ಮೊಸರು ಕುಡಿಕೆ ಉತ್ಸವದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜೋಕಾಲಿ ಬಳಗದ ಅಧ್ಯಕ್ಷ ಚಂದ್ರಶೇಖರ ಮುಂಡಾಳ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಂದೂರು ಗ್ರಾಪಂ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ಅಧ್ಯಕ್ಷ, ವಕೀಲ ಮಹೇಶ್ ಕೆ. ಸವಣೂರು, ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಕುಮಾರ್ ಜೈನ್, ಪುಣ್ಚತ್ತಾರು ಶ್ರೀ ಹರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕಟೀಲ್ ಉಪಸ್ಥಿತರಿದ್ದರು.
ಪವನ್ ಮರಕ್ಕಡ ವಂದಿಸಿ, ವಿಜೇತ್ ಮುಂಡಾಲ ಕಾರ್ಯಕ್ರಮ ನಿರೂಪಿಸಿದರು.