ಸವಣೂರು: ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19ರಂದು ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು.

ಪುರೋಹಿತ್ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕುವೆತ್ತೋಡಿ ಅವರು ವೈದಿಕ ಕಾರ್ಯಕ್ರಮ ನೆರವೇರಿಸಿದರು.

ಬೆಳಿಗ್ಗೆ ಪಂಚಗವ್ಯ ಪುಣ್ಯಾಹ ನಡೆದು, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಜರಗಿತು. ಬಳಿಕ ಗಣಹೋಮ, ಮಂಗಳಾರತಿ ನಡೆಯಿತು. ನಂತರ ಹೂಕಟ್ಟುವ ಸ್ಪರ್ಧೆ ಜರಗಿತು. ಭಜನಾ ಕಾರ್ಯಕ್ರಮದಲ್ಲಿ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ, ಕೆಳಗಿನಕೇರಿ ಕೊಪ್ಪ ಶ್ರೀ ಶಾರದಾ ಭಜನಾ ಮಂಡಳಿ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಳಿ ಪಾಲ್ಗೊಂಡವು. ಮಧ್ಯಾಹ್ನ ರಂಗಪೂಜೆ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಆಡಳಿತ ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.