ಚೆನ್ನೈ: ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಯಜ್ ಆಂಟೋನಿ ಪುತ್ರಿ ಮೀರಾ (16) ಇಂದು ಮುಂಜಾನೆ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.
ಆಟ, ಓದುಗಳಲ್ಲಿ ಚುರುಕಾಗಿದ್ದ ಅವರ ಖಿನ್ನತೆಗೆ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.