ಪುತ್ತೂರು: ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನಾ ಸಭೆ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರಿಗೆ ಶೇ. 33 ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಬಗ್ಗೆ ಸಂಭ್ರಮ ವ್ಯಕ್ತಪಡಿಸಲಾಯಿತು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷ ಯಶಸ್ವಿನಿ ಶಾಸ್ತ್ರಿ,ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶೋಧ ಕೆ. ಗೌಡ, ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಮೋರ್ಚಾ ಹಾಗೂ ಪ್ರಕೋಷ್ಟಗಳ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.