ಪುತ್ತೂರು: ಬೆಂಗಳೂರಿನ ಕಂಬಳದಲ್ಲಿ ಭಾಗವಹಿಸಲು ಕಂಬಳ ಕೋಣಗಳಿಗೆ ಅವಕಾಶ ಕಲ್ಪಿಸಿದ್ದು, ಈ ಹಿನ್ನೆಲೆಯಲ್ಲಿ ಕಂಬಳ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸೆ. 30ರಂದು ಸಂಜೆ 3 ಗಂಟೆಗೆ ಮಂಗಳೂರು ಹೊಟೇಲ್ ವುಡ್’ಲ್ಯಾಂಡಿನಲ್ಲಿ ಕೋಣಗಳ ಯಜಮಾನರುಗಳ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆ ನೀಡುವಂತೆ ತಿಳಿಸಲಾಗಿದೆ.
ನವಂಬರಿನಲ್ಲಿ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕಂಬಳ ಕೋಣಗಳ ಯಜಮಾನರುಗಳ ಸಭೆ ಕರೆದಿದ್ದು, ಬೆಂಗಳೂರು ಕಂಬಳದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ. ಮಾಹಿತಿಗೆ ರಾಜೀವ್ ಶೆಟ್ಟಿ ಎತ್ತೂರು 8861949607, ನಿರಂಜನ್ ರೈ ಮಠಂತಬೆಟ್ಟು 9972772505 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.