ಪುತ್ತೂರು: ತಾಲೂಕಿನ ಪಲ್ಲತ್ತಾರು ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಅಧ್ಯಕ್ಷೆ ರಾಧಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಾಲಾ ಶಿಕ್ಷಕಿ ರಂಜಿನಿ ಎಸ್. ರಾವ್ ಪಾಲ್ಗೊಂಡು ಶಿಕ್ಷಣದ ಕುರಿತು ಸದಸ್ಯರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ, ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಸದಸ್ಯರು ಉಪಸ್ಥಿತರಿದ್ದರು.