ಮಧ್ಯಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸಂದರ್ಭ ಆದಿಚುಂಚನಗಿರಿ ಮಹಾಸಂಸ್ಥಾನದ ಮಹಾಸ್ವಾಮೀಜಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ ನೀಡಿದರು.
ನರ್ಮದಾ ನದಿ ತೀರಕ್ಕೆ ಆಗಮಿಸಿ, ಬಳಿಕ ಪ್ರತಿಮೆ ಅನಾವರಣ ಸ್ಥಳಕ್ಕೆ ಭೇಟಿ ನೀಡಿದರು.

ಈ ಸಂರ್ಭದಲ್ಲಿ ಬೆಂಗಳೂರು ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮೈಸೂರು ಸೋಮೇಶ್ವರನಾಥ ಸ್ವಾಮೀಜಿ, ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ದಿಲ್ಲಿ ಶಾಖಾ ಮಠದ ಆನಂದ ಚೈತನ್ಯನಾಥ ಸ್ವಾಮೀಜಿ ಉಪಸ್ಥಿತರಿದ್ದರು.
