ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶನಿವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಚಾಲನೆ ನೀಡಿ, ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆ. ಇದಕ್ಕೆ ಸರಕಾರದಿಂದ ಸರಿಯಾದ ಮಾನ್ಯತೆ ಸಿಗದೇ ಇರುವುದೇ ಕಾರಣ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದ ಅವರು, ಹಿಂದೆ ಕ್ರೀಡೆಯಲ್ಲಿ ಶಾಲಾ ಮಟ್ಟದಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಪ್ರಸ್ತುತ ಸರಕಾರದಿಂದ ನಡೆಯುವ ಬೇರೆ ಬೇರೆ ರೀತಿಯ ಕ್ರೀಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಇದೆ. ಈ ನಿಟ್ಟಿನಲ್ಲಿ ಕ್ರೀಡೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿ ಅದಕ್ಕೆ ಸಮಯ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ಯುವಕ-ಯುವತಿಯರು ಪ್ರಯತ್ನಿಸಬೇಕು ಎಂದರು. ಈ ಬಾರಿಯ ರಾಜ್ಯಮಟ್ಟದ ಕ್ರೀಡಾಕೂಟವೂ ಪುತ್ತೂರಿನಲ್ಲೇ ನಡೆಯಲಿದೆ ಎಂದು ತಿಳಿಸಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕ್ರೀಡಾ ಧ್ವಜಾರೋಹಣ ಮಾಡಿದರು.
ವೇದಿಕೆಯಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಸುಳ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೇವರಾಜ ಮುತ್ಲಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಹರಿಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸೀತಾರಾಮ ಗೌಡ ಮಿತ್ತಡ್ಕ, ರಾಷ್ಟ್ರಪ್ರಶಸ್ತಿ ವಿಜೇತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ಕೋರ್ಮಂಡ, ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ಪೈ ನಾಯಕ್, ಪಟ್ಟೆ ಶ್ರೀಕೃಷ್ಣ ಯುವಕ ಮಂಡಲದ ಅಧ್ಯಕ್ಷ ಲಿಂಗಪ್ಪ ಗೌಡ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಬಿರಾವು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಕೃಷ್ಣಪ್ರಸಾದ್ ಆಳ್ವ ಉಪಸ್ಥಿತರಿದ್ದರು.
ಕಡಬ, ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದ ನೋಡೆಲ್ ಅಧಿಕಾರಿ ಮಾಮಚ್ಚನ್ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.
ಪುರುಷರ ವಿಭಾಗದಲ್ಲಿ 14, ಮಹಿಳೆಯರ ವಿಭಾಗದಲ್ಲಿ 15 ಹಾಗೂ 5 ಗುಂಪು ಆಟಗಳು ನಡೆಯಲಿವೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ, ನಗರಸಭೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತಾಲೂಕು ಯುವಜನ ಒಕ್ಕೂಟ, ಪಟ್ಟೆ ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಪಟ್ಟೆ ವಾಲಿ ಫ್ರೆಂಡ್ಸ್ ಆಶ್ರಯದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ.