ವಾಷಿಂಗ್ಟನ್: ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟಿನ ಬೆನ್ನಲ್ಲೇ, ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರುಬಿನ್ ಅವರು ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ. ಹಾಗೆಯೇ, “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದ್ದಾರೆ.
““ಯಾವುದೇ ಎರಡು ದೇಶಗಳು ಸಂಘರ್ಷಕ್ಕೆ ಇಳಿದಾಗ, ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾದಾಗ ಮೂರನೇ ದೇಶವು ಮಧ್ಯಸ್ಥಿಕೆ ವಹಿಸುವುದು ಸುಲಭ. ಆದರೆ, ಯಾವುದೇ ಒಂದು ದೇಶದ ಪರ ನಿಲ್ಲುವುದು ಕಷ್ಟ. ಈಗ ಭಾರತ ಹಾಗೂ ಕೆನಡಾ ವಿಚಾರದಲ್ಲಿ ಅಮೆರಿಕಕ್ಕೂ ಇದೇ ಆಗುತ್ತಿದೆ. ಆದರೂ, ದ್ವಿಪಕ್ಷೀಯ ಹಾಗೂ ವ್ಯೂಹಾತ್ಮಕ ಸಂಬಂಧದ ವಿಚಾರದಲ್ಲಿ ಅಮೆರಿಕಕ್ಕೆ ಭಾರತವೇ ಪ್ರಮುಖವಾಗಿದೆ. ಅಷ್ಟಕ್ಕೂ, ಕೆನಡಾದ ಪರಿಸ್ಥಿತಿಯು ಆನೆ (ಭಾರತ) ಜತೆ ಇರುವೆ ಕದನಕ್ಕೆ ಇಳಿದಿದೆ” ಎಂದು ಕೆನಡಾಗೆ ಗೇಲಿ ಮಾಡಿದ್ದಾರೆ.
ದಿನೇದಿನೆ ಉಲ್ಬಣವಾಗುತ್ತಿರುವ ಕಾರಣ ಅಮೆರಿಕ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ತನಿಖೆ ವಿಚಾರದಲ್ಲಿ ಭಾರತ ಸಹಕರಿಸಬೇಕು ಎಂದೂ ಹೇಳಿದೆ.