ಪುತ್ತೂರು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ, ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಕುರಿತು ಮಾಹಿತಿ ತಿಳಿದ ಗ್ರಾಮಸ್ಥರು ಯುವಕರನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲಿನಲ್ಲಿ ನಡೆದಿದೆ.
ಮುಂಡ್ರಬೈಲಿನ ನಿರ್ಜನ ಪ್ರದೇಶದಲ್ಲಿ ನಶೆಯಲ್ಲಿದ್ದ ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್, ಶಝ್, ಜಾಯಿ ಎಂಬವರು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರು, ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತರಿಂದ ಬೈಕ್, ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.