ವಿಟ್ಲ : ಪುಟ್ಟ ಬಾಲಕಿಯೊಬ್ಬಳು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲಿ ಭಾನುವಾರ ಮುಂಜಾನೆ ಮೃತಪಟ್ಟಿದ್ದಾಳೆ.
ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಮೃತಪಟ್ಟ ಬಾಲಕಿ.
ಮುರದಲ್ಲಿ ಅಲ್ ಬಿರ್ ಸ್ಕೂಲ್ ನಲ್ಲಿ ಎಲ್ಕೆಜಿ ಕಲಿಯುತ್ತಿದ್ದ ಈಕೆ ಅನಾರೋಗ್ಯದಿಂದ ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.