ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬನ್ನೂರಿನ ಕರ್ಮಲದಲ್ಲಿ ನಡೆದಿದೆ.

ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ, ವಿವೇಕಾನಂದ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿನಿ ಕೀರ್ತಿಕಾ (19) ಈ ಕೃತ್ಯ ಎಸಗಿದವರು.

ಕಿಶೋರ್ ಎಂಬವರ ಪುತ್ರಿಯಾಗಿರುವ ಈಕೆ ಮನೆಯಲ್ಲಿ ಸೀಲಿಂಗ್ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top