ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಮಂಗಳವಾರ ನಡೆಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು,, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಮೀನಾಕ್ಷಿ ಶಾಂತಿಗೋಡು, ಟಿ.ಎ.ಪಿ.ಸಿ.ಎಮ್.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ, ಮಾಜಿ ನಗರಸಭಾ ಅಧ್ಯಕ್ಷ ಲೋಕೇಶ್ ಹೆಗ್ಡೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್. ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಬಿ.ಎಲ್.ಎ. ಹರೀಶ್ ಬಿಜತ್ರೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುರೇಶ್ ಆಳ್ವ, ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಬನ್ನೂರು ಶಕ್ತಿ ಕೇಂದ್ರ ಪ್ರಮುಖ ನಾಗೇಶ್ ಬನ್ನೂರು, ಕಬಕ ಶಕ್ತಿ ಕೇಂದ್ರ ಪ್ರಮುಖ ಜಯರಾಮ ನೆಕ್ಕರೆ, ಒಳಮೊಗ್ರು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ರೈ, ಪಕ್ಷದ ಪ್ರಮುಖರಾದ ವಿಶ್ವನಾಥ ಕುಲಾಲ್, ರಫೀಕ್ ಪರ್ಲಡ್ಕ, ಉಮರಬ್ಬ ಗಡಿಯಾರ ಹಾಗೂ ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು ಭಾಗವಹಿಸಿದ್ದರು.