ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ  ಪಡೆದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ಬಾಲಕಿಯರ 4*100 ಮೀಟರ್ ರಿಲೇಯಲ್ಲಿ ಗುಣಶ್ರೀ, ಪ್ರತೀಕ್ಷಾ, ತ್ರಿಶಾ, ಕೀರ್ತಿ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top