ರಾಂಚಿ: ಜಾರ್ಖಂಡ್’ನಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಸಾವನ್ನಪ್ಪಿದ್ದಾರೆ.
ಪಶ್ಚಿಮ ಸಿಂಗ್ಬುಮ್ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದಾಗ ಪೊದೆಯೊಂದರಲ್ಲಿ ಇಟ್ಟಿದ್ದ ಐಇಡಿಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾಗ ನಡೆದಿದೆ.
ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ ಘಟಕದ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇಬ್ಬರನ್ನೂ ವಿಮಾನದಲ್ಲಿ ರಾಂಚಿಗೆ ಕರೆದೊಯ್ಯಲಾಗಿದೆ. ಆದರೆ ಕಾನ್‌ಸ್ಟೆಬಲ್ ರಾಜೇಶ್ ಕುಮಾರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.