ರಾಜಶೇಖರ ಕೋಟ್ಯಾನ್ ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ | ಸ್ಪಷ್ಟನೆ ನೀಡಿದ ಪುತ್ತಿಲ ಪರಿವಾರ

ಪುತ್ಯೂರು : 2023ರ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದ್ದು, ಈ ಸಂದರ್ಭದಲ್ಲಿ ಕಾರ್ಯಕರ್ತರಾಗಿ ದುಡಿದಿದ್ದವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಓರ್ವರಾಗಿದ್ದಾರೆ.

ಇದೀಗ ರಾಜಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಗಳು ಕೇಳಿ ಬರುತ್ತಿದ್ದು, ಕರ್ನಾಟಕದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣಾ ಪೂರ್ವ ವ್ಯವಹಾರ ನಡೆದಿದ್ದು, ಈ ವಿಷಯದಲ್ಲಿ ಪುತ್ತಿಲ ಪರಿವಾರ ಹೆಸರು ಕೇಳಿ ಬಂದಿದೆ.

ಈ ಕುರಿತು ಸ್ಪಷ್ಟನೆ ನೀಡಿದ ಪುತ್ತಿಲ ಪರಿವಾರ, ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರಿನ ಪ್ರತಿಯಲ್ಲಿ ಪುತ್ತಿಲ ಪರಿವಾರದ ಉಲ್ಲೇಖವಿಲ್ಲ. ರಾಜಶೇಖರ ಕೋಟ್ಯಾನ್ ಅವರ ವೈಯಕ್ತಿಕ ವ್ಯವಹಾರಕ್ಕೂ, ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top