ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಪೆರ್ನೆ ವಲಯದ ಕೆದಿಲ ಬಿ ಕಾರ್ಯಕ್ಷೇತ್ರದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಮಾಸಾಶನ ಸೌಲಭ್ಯಗಳ ವಿತರಣೆ ಮತ್ತು ‘ಮಧುರ’ ಜ್ಞಾನವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿ ಸ್ವ ಉದ್ಯೋಗಕ್ಕೆ ಪೂರಕವಾಗಿ ಮಲ್ಲಿಗೆ ಕೃಷಿ ಬಗ್ಗೆ ಮಾಹಿತಿ ಮತ್ತು ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.
ಕೆದಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ವಾಲ್ತಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಯೋಜನಾಧಿಕಾರಿ ಚೆನ್ನಪ್ಪ ಗೌಡ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ರಜನಿ ಅವರು ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಲಯದ ವಿವಿಧ ಕಾರ್ಯಕ್ಷೇತ್ರಗಳಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ಹಾಗೂ ಹೊಸದಾಗಿ ಮಾಸಾಶನ ಸೌಲಭ್ಯ ಮಂಜೂರಾಗಿರುವ ಕಮಲಾ ಮರ್ದೆಲ್ ಅವರಿಗೆ ಮಾಸಾಶನ ಕೈಪಿಡಿ ವಿತರಿಸಲಾಯಿತು. ತಾಲೂಕಿನ ಮದ್ಯವರ್ಜನ ಶಿಬಿರದಲ್ಲಿ ಸಹಕರಿಸಿದ ವಲಯದ ಜನಜಾಗೃತಿ ವೇದಿಕೆ, ನವಜೀವನ ಸಮಿತಿ, ಒಕ್ಕೂಟಗಳು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಜಸ್ಟ್ಲೀಟಾ, ಜನಜಾಗೃತಿ ವೇದಿಕೆ ಸದಸ್ಯರಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್, ನವೀನ್ ಕುಮಾರ್ ಪದಬರಿ, ಒಕ್ಕೂಟದ ವಲಯಾಧ್ಯಕ್ಷ ರಾಬರ್ಟ್ ಫೆರ್ನಾಂಡಿಸ್, ಪೆರ್ನೆ ಗ್ರಾಮ ಪಂಚಾಯಿತಿ ಸದಸ್ಯ ಕೇಶವ ಸುಣ್ಣಾನ, ನಿವೃತ್ತ ಶಿಕ್ಷಕ ಗೋಪಾಲಕೃಷ್ಣ ಪ್ರಗತಿ ವಳಂಗಜೆ, ಒಕ್ಕೂಟ ಹಾಗೂ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಮೀನಾಕ್ಷಿ, ವಲಯ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿನಿಧಿಗಳು, ವಿ.ಎಲ್.ಇ. ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.