ಹೊಸದಿಲ್ಲಿ: ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳು ಮತ್ತೆ ತುಟ್ಟಿಯಾಗಿದೆ.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 209 ರೂ.ಗಳಷ್ಟು ಹೆಚ್ಚಿಸಿವೆ. ಇವು ತಕ್ಷಣದಿಂದಲೇ ಜಾರಿಗೆ ಬರುತ್ತವೆ.
ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು 158 ರೂ. ಕಡಿತಗೊಳಿಸಿದ ಸುಮಾರು ಒಂದು ತಿಂಗಳ ನಂತರ ಬೆಲೆಯಲ್ಲಿ ಈ ಹೆಚ್ಚಳವಾಗಿದೆ.
ಗಮನಾರ್ಹವಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್ ಗಳ ಬೆಲೆಯು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಗಾಗುತ್ತದೆ. ಹೀಗಾಗಿ ಬದಲಾದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ.
ಎಲ್ಲೆಲ್ಲಿ ಎಷ್ಟಿದೆ?
ದೆಹಲಿ- 1,731.50 ರೂ
ಮುಂಬೈ – 1684 ರೂ
ಲಕ್ನೋ- 1,845 ರೂ
ಚೆನ್ನೈ- 1,898 ರೂ
ಬೆಂಗಳೂರು- 1,813 ರೂ
ಕೋಲ್ಕತ್ತಾ – 1839 ರೂ