ಪುತ್ತೂರು: ಸುಳ್ಯ ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತು.
ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದರು.
ನಿವೃತ್ತ ಜಿಲ್ಲಾ ನ್ಯಾಯಾಧೀಶ ಮವಮೋಹನ ಬನಾರಿ, ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಜಯಪ್ರಕಾಶ ಕೆ, ಕಾವು ಲಯನ್ಸ್ ಕ್ಲಬ್ ನ ಅಧ್ಯಕ್ಷ ದಿವ್ಯನಾಥ ಶೆಟ್ಟಿ, ಸೇವಾ ಸಂಗಮ ಸಲಹಾ ಸಮಿತಿ ಸದಸ್ಯ, ವ್ಯಕ್ತಿತ್ವ ವಿಕಸನ ತರಬೇತುದಾರ ಡಾ. ಅನುರಾಧಾ ಕುರುಂಜಿ, ಶಾಲಾ ಎಸ್.ಡಿ.ಎಂ.ಸಿ, ಅಧ್ಯಕ್ಷ ಯತಿನ್ ಪೂಜಾರಿ, ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಬಿಳಿನೆಲೆ, ಎನ್ಎಸ್ಎಸ್ ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಕಾರ್ಯದರ್ಶಿ ವಿಶ್ವಕಿರಣ್, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್, ಶಾಲಾ ಮುಖ್ಯ ಕ್ಷಕಿ ಸವಿತಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.